ಕಣ್ಣಿನ ದೃಷ್ಟಿ ಹಾಗೂ ಆರೋಗ್ಯಕ್ಕೆ ಈ ಆಹಾರಗಳನ್ನು ಸೇವಿಸಿ
ಇತ್ತೀಚಿನ ದಿನಗಳಲ್ಲಿ ವಯಸ್ಕರಿಗಿಂತ ಹೆಚ್ಚಾಗಿ ಮಕ್ಕಳಲ್ಲಿಯೇ ದೃಷ್ಟಿ ದೋಷದ ಸಮಸ್ಯೆಗಳು ಕಂಡು ಬರುತ್ತವೆ.
ಆದ್ದರಿಂದ ಕಣ್ಣಿನ ಆರೋಗ್ಯವನ್ನು ಕಾಪಾಡಲು ಈ ಆಹಾರಗಳನ್ನು ಸೇವಿಸಿ.
ಮೀನು: ಇದು ಪೌಷ್ಟಿಕಾಂಶಗಳಲ್ಲಿ ಸಮೃದ್ಧವಾಗಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.
ಡ್ರೈ ಫ್ರೂಟ್ಸ್ನಲ್ಲಿ ಒಮೆಗಾ 3ಕೊಬ್ಬಿನಾಮ್ಲಗಳು ಹೇರಳವಾಗಿದ್ದು, ಕಣ್ಣಿಗೆ ತುಂಬಾ ಒಳ್ಳೆಯದು.
ಸಿಟ್ರಸ್ ಹಣ್ಣಿನಲ್ಲಿ ಉತ್ಕರ್ಷಣಾ ನಿರೋಧಕಗಳು ಸಮೃದ್ಧವಾಗಿದ್ದು, ಕಣ್ಣಿನ ಆರೋಗ್ಯವನ್ನು ಕಾಪಾಡುತ್ತದೆ.
ಸೊಪ್ಪು ತರಕಾರಿಗಳಲ್ಲಿ ಕಣ್ಣಿನ ಆರೋಗ್ಯಕ್ಕೆ ಪೂರಕವಾದ ವಿಟಮಿನ್ ಸಿ ಸಮೃದ್ಧವಾಗಿದೆ.
ಕ್ಯಾರೆಟ್ನಲ್ಲಿರುವ ವಿಟಮಿನ್ ಎ, ಬೀಟಾ ಕ್ಯಾರೋಟಿನ್ ಹೇರಳವಾಗಿದ್ದು, ಕಣ್ಣಿಗೆ ತುಂಬಾ ಒಳ್ಳೆಯದು.
ಸಿಹಿ ಗೆಣಸು ಉತ್ಕರ್ಷಣ ನಿರೋಧಕ, ವಿಟಮಿನ್ ಇ ಯ ಉತ್ತಮ ಮೂಲವಾಗಿದ್ದು, ಕಣ್ಣಿನ ಆರೋಗ್ಯ ಕಾಪಾಡುತ್ತದೆ.