ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 15ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೆಯೇ ಅನೇಕ ಪ್ರಯಾಣಿಕರನ್ನು ಬಸ್ನಿಂದ ಜೀವಂತವಾಗಿ ಹೊರತೆಗೆಯಲಾಯಿತು. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚುತ್ತಿತ್ತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 3:33 pm, Wed, 23 August 23