Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು

| Updated By: Rashmi Kallakatta

Updated on: Jan 11, 2023 | 6:28 PM

ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟಗೊಂಡಿದ್ದು ಹಲವರು ಹತ್ಯೆಯಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ

Afghanistan ತಾಲಿಬಾನ್ ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟ; 3 ಸಾವು
ಪ್ರಾತಿನಿಧಿಕ ಚಿತ್ರ
Follow us on

ಇಂದು (ಬುಧವಾರ) ಸಂಜೆ ತಾಲಿಬಾನ್ (Taliban) ವಿದೇಶಾಂಗ ಸಚಿವಾಲಯದ ಪ್ರವೇಶ ದ್ವಾರದಲ್ಲಿ ಬಾಂಬ್ ಸ್ಫೋಟಗೊಂಡಿದೆ (Bomb Blast) ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಸ್ಫೋಟದಲ್ಲಿ ಕನಿಷ್ಠ ಮೂವರು ಸಾವಿಗೀಡಾಗಿದ್ದು ಇಬ್ಬರು ಗಾಯಗೊಂಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಅಮು ಟಿವಿ ವರದಿ ಮಾಡಿದೆ. ಮೂಲಗಳ ಪ್ರಕಾರ, ಸ್ಫೋಟ ಸಂಭವಿಸಿದಾಗ ತಾಲಿಬಾನ್ ಮತ್ತು ಚೀನಾದ ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿತ್ತು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಬಾಗಿಲಿನ ಮುಂಭಾಗದಲ್ಲಿ ಸ್ಫೋಟ ಸಂಭವಿಸಿದೆ ಎಂದು ಟೋಲೋ ನ್ಯೂಸ್ ವರದಿ ಮಾಡಿದೆ. ಆದಾಗ್ಯೂ, ತಾಲಿಬಾನ್ ನೇತೃತ್ವದ ಅಧಿಕಾರಿಗಳು ಸಾವಿನ ಸಂಖ್ಯೆಯ ಬಗ್ಗೆ ಯಾವುದೇ ವಿವರಗಳನ್ನು ನೀಡಿಲ್ಲ.

ವಿದೇಶಾಂಗ ಸಚಿವಾಲಯದ ಗೇಟ್ ಬಳಿ ಭಾರೀ ಸ್ಫೋಟ ಸಂಭವಿಸಿದಾಗ ತಾಲಿಬಾನ್ ಮತ್ತು ಚೀನಾದ ಅಧಿಕಾರಿಗಳ ನಡುವೆ ಸಭೆ ನಡೆಯುತ್ತಿದೆ ಎಂದು ಕೆಲವು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಜನವರಿ 4 ರಂದು ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್‌ನಲ್ಲಿ ಹಲವಾರು ಸ್ಫೋಟಗಳು ಕೇಳಿಬಂದವು ಎಂದು ಟೋಲೋ ನ್ಯೂಸ್ ವರದಿ ಮಾಡಿದೆ.

ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದರು ಮತ್ತು ಎಂಟು ಜನರು ಗಂಭೀರವಾಗಿ ಗಾಯಗೊಂಡ ಮೂರು ದಿನಗಳ ನಂತರ ಸ್ಫೋಟಗಳು ಸಂಭವಿಸಿವೆ ಎಂದು ಖಾಮಾ ಪ್ರೆಸ್ ವರದಿ ಮಾಡಿದೆ.

ಸ್ಫೋಟವು ಕಾಬೂಲ್‌ನ ಮಿಲಿಟರಿ ವಿಮಾನ ನಿಲ್ದಾಣದ ಮುಖ್ಯ ಗೇಟ್‌ಗೆ ಸಮೀಪದಲ್ಲಿ  ಸಂಭವಿಸಿದೆ ಎಂದು ತಾಲಿಬಾನ್ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ನಫೀ ಟಕ್ಕೂರ್ ಹೇಳಿದ್ದಾರೆ.

ಇದನ್ನೂ ಓದಿ: JR NTR: ಅಮೆರಿಕದಲ್ಲಿ ಜೂ.ಎನ್​ಟಿಆರ್​​ನ​​ ಭೇಟಿ ಮಾಡಲು ಫ್ಯಾನ್ಸ್ ಮುತ್ತಿಗೆ; ವಿಡಿಯೋ ವೈರಲ್

ಕಳೆದ ತಿಂಗಳು, ಕಾಬೂಲ್‌ನ ಹೃದಯಭಾಗದಲ್ಲಿ ಚೀನಾದ ಒಡೆತನದ ಹೋಟೆಲ್ ಅನ್ನು ಗುರಿಯಾಗಿಸಲಾಗಿತ್ತು.

ಆಗಸ್ಟ್ 2021 ರಲ್ಲಿ ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡ ನಂತರ, ಇಸ್ಲಾಮಿಕ್ ಸ್ಟೇಟ್‌ನ ಆಫ್ಘನ್ ಶಾಖೆಗೆ ಸಂಬಂಧಿಸಿದ ಸಶಸ್ತ್ರ ಗುಂಪುಗಳು ಜನಾಂಗೀಯ ಹಜಾರಾಗಳು, ಅಫ್ಘಾನ್ ಶಿಯಾಗಳು, ಸೂಫಿಗಳು ಮತ್ತು ಇತರರನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿಗಳನ್ನು ನಡೆಸಿವೆ. ಈ ದಾಳಿಯಲ್ಲಿ ನೂರಾರು ಜನರು ಹತ್ಯೆಗೀಡಾಗಿದ್ದಾರೆ.

ಮತ್ತಷ್ಟು ವಿದೇಶ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:49 pm, Wed, 11 January 23